New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ? ಇಲ್ಲಿದೆ ಸಂಪೂರ್ಣವಾದ ವಿವರ!

New Ration Card: ನಮಸ್ಕಾರ ಎಲ್ಲರಿಗೂ, ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಬೇಕು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿಗೆ ಒಂದು ಶುಭ ಸುದ್ದಿ ಎಂದು ಹೇಳಬಹುದು. ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಜನರು ತುದಿಗಾಡಿನಲ್ಲಿ ನಿಂತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. 

ಯಾಕೆಂದರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡಿನಲ್ಲಿರುವ ದೋಷಗಳನ್ನು ಸರಿಪಡಿಸಿಕೊಳ್ಳಲು ಹಾಗೂ ರೇಷನ್ ಕಾರ್ಡಿನಲ್ಲಿ ಸದಸ್ಯರನ್ನು ಸೇರಿಸಿಕೊಳ್ಳಲು ಹಾಗೂ ತೆಗೆದುಹಾಕಲು ಜನರು ಕಾಯುತ್ತಿದ್ದಾರೆ. ಏಕೆಂದರೆ, ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಒಂದು ಪ್ರಮುಖವಾದ ದಾಖಲೆಯಾಗಿದೆ.

ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿಯ ಪ್ರಕಾರ ಸುಮಾರು 2.90 ಲಕ್ಷಕ್ಕಿಂತ ಹೆಚ್ಚು ಸ್ವೀಕಾರಗಳು ಕಂಪ್ಲೀಟ್ ಆಗಿದ್ದು, ಮುಂದಿನ ತಿಂಗಳಲ್ಲಿ ಇಲಾಖೆಯ ಇವುಗಳನ್ನು ಪರಿಶೀಲಿಸಿ ವಿತರಣೆ ಮಾಡಲಾಗುತ್ತದೆ ವಿತರಣೆ ಮಾಡಿದ ನಂತರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುತ್ತೇವೆ ಎಂದು ತಿಳಿಸಲಾಗಿದೆ. 

ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಆರಂಭ? 

ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಮಾಹಿತಿಯನ್ನು ತಿಳಿದುಕೊಳ್ಳಿ. ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ 15ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 

ಬೇಕಾಗುವ ದಾಖಲೆಗಳು: 

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ 
  • ಎಲ್ಲಾ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ 
  • ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳು ಇದ್ದಲ್ಲಿ ಮಾತ್ರ) 

ಮೇಲೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅವಕಾಶಗಳು ಇನ್ನೂ ಕೂಡ ಕಲ್ಪಿಸಿಕೊಡಲಾಗಿಲ್ಲ. ಮುಂದಿನ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿ ಕೊಡುವ ಸಾಧ್ಯತೆ ಇರುತ್ತದೆ.

WhatsApp Group Join Now

Leave a Comment

error: Content is protected !!